ಹೈದರಾಬಾದ್: ತಿರುಪತಿ ಏರ್ ಪೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ತಿರುಪತಿ ಏರ್ ಪೋರ್ಟ್ ನಲ್ಲಿ ಬಾಂಬ್ ಇಡಲಾಗಿದೆ ಎಂದು ಕಿಡಿಗೇಡಿಗಳು ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಕಚೇರಿಗೆ ಇ-ಮೇಲ್ ಸಂದೇಶ ರವಾನಿಸಿದ್ದಾರೆ. ತಕ್ಷಣ ಏರ್ ಪೋರ್ಟ್ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತಿರುಪತಿ ಏರ್ ಪೋರ್ಟ್ ಗೆ ಬಾಂಬ್ ನಿಷ್ಕ್ರಿಯದಳ, ಸ್ಜ್ವಾನದಳ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಬೆದರಿಕೆ ಇ-ಮೇಲ್ ರವಾನಿಸಿದ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿ, ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.