alex Certify ತಿರುಪತಿ ತಿರುಮಲ ಬೆಟ್ಟದಲ್ಲಿ 45 ಭಕ್ತರಿದ್ದ ಬಸ್ ಕಣಿವೆಗೆ ಬಿದ್ದು 6 ಮಂದಿ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ತಿರುಮಲ ಬೆಟ್ಟದಲ್ಲಿ 45 ಭಕ್ತರಿದ್ದ ಬಸ್ ಕಣಿವೆಗೆ ಬಿದ್ದು 6 ಮಂದಿ ಗಾಯ

ತಿರುಪತಿ: 45 ಭಕ್ತರಿದ್ದ ಎಲೆಕ್ಟ್ರಿಕ್ ಬಸ್ ಪಲ್ಟಿಯಾಗಿ ಕಣಿವೆಗೆ ಬಿದ್ದ ಪರಿಣಾಮ ಚಾಲಕ ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ತಿರುಪತಿ ತಿರುಮಲ ಬೆಟ್ಟದಲ್ಲಿ ನಡೆದಿದೆ.

ಆಂಧ್ರಪ್ರದೇಶದ ತಿರುಮಲದಿಂದ ತಿರುಪತಿಗೆ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಣಿವೆಗೆ ಪಲ್ಟಿಯಾಗಿದೆ. ಬುಧವಾರ ಮಧ್ಯಾಹ್ನ ಒಂದನೇ ಘಾಟ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.

ಕರ್ತವ್ಯ ಮುಗಿಸಿ ಅದೇ ಮಾರ್ಗದಲ್ಲಿ ಹೋಗುತ್ತಿದ್ದ ವಿಶೇಷ ರಕ್ಷಣಾ ಪಡೆ(ಎಸ್‌ಪಿಎಫ್) ಸಿಬ್ಬಂದಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಅವರು ಕಾರ್ಯಪ್ರವೃತ್ತರಾಗಿ ಭಕ್ತರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು RUIA ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...