
ತಿರುಪತಿ: ದೀಪಾವಳಿ ಹಬ್ಬದಂದು ತಿರುಪತಿ ತಿಮ್ಮಪ್ಪನ ಭಕ್ತರಿಗೆ ದರ್ಶನ ಇರುವುದಿಲ್ಲ. ಸೋಮವಾರ ಮತ್ತು ಮಂಗಳವಾರ ತಿರುಪತಿ ತಿಮ್ಮಪ್ಪನ ದರ್ಶನ ಇರುವುದಿಲ್ಲ.
ಅಕ್ಟೋಬರ್ 25 ರಂದು ಸೂರ್ಯಗ್ರಹಣ ಹಿನ್ನೆಲೆಯಲ್ಲಿ ದೇವಾಲಯವನ್ನು ಬಂದ್ ಮಾಡಲಾಗುವುದು. ಅಕ್ಟೋಬರ್ 24 ರಂದು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಬೆಳಗ್ಗೆ 8 ಗಂಟೆಯಿಂದ ಸಂಜೆ 7.30 ರ ವರೆಗೆ ಬಾಲಾಜಿ ದರ್ಶನ ಇರುವುದಿಲ್ಲ. ನವೆಂಬರ್ 8 ರಂದು ಕೂಡ ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ದೇವಾಲಯವನ್ನು ಬಂದ್ ಮಾಡಲಾಗುವುದು. ಈ ಕುರಿತು ಟಿಟಿಡಿ ಆಡಳಿತ ಮಂಡಳಿಯಿಂದ ಮಾಹಿತಿ ನೀಡಲಾಗಿದೆ.