ತಿರುಪತಿ: ಆಂಧ್ರಪ್ರದೇಶದ ತಿರುಪತಿಯ ಪ್ರತಿಷ್ಠಿತ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಇದೀಗ ಮತ್ತೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ವಿವಿಧ ದೇವಾಲಯ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ.
ತಿರುಪತಿಯ ಇಸ್ಕಾನ್ ದೇವಾಲಯಕ್ಕೆ ಬಾಂಬ್ ಬೆದರಿಕೆಯೊಡ್ಡಲಾಗಿದೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದ್ದು, ಇಸ್ಕಾನ್ ದೇವಾಲಯ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ವರದಿಗಳ ಪ್ರಕಾರ ಐಎಸ್ಐಎಸ್ ಉಗ್ರರು ದೇವಾಲಯವನ್ನು ಸ್ಫೋಟಿಸುವುದಾಗಿ ಇ-ಮೇಲ್ ಸಂದೇಶದಲ್ಲಿ ಕುಳುಹಿಸಲಾಗಿದೆ. ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಇದೇ ವೇಳೆ ಪ್ರಮುಖ ಹೋಟೆಲ್ ಗಳಿಗೂ ಮತ್ತೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ತಿಳಿದುಬಂದಿದೆ.