
ನವದೆಹಲಿ: ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ, ಪ್ರಾಣಿಗಳ ಕೊಬ್ಬು ಬಳಕೆ ವಿವಾದ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ.
ರೈತ, ಹಿಂದೂ ಸೇನೆ ಅಧ್ಯಕ್ಷ ಸುರ್ಜಿತ್ ಸಿಂಗ್ ಯಾದವ್ ಎಂಬುವವರು ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ. ತಿರುಪತಿಯ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ ಬಳಸಿ ತಯಾರಿಸಿದ ಲಡ್ಡುವನ್ನು ನೀಡಲಾಗಿದೆ. ಇದರಿಂದ ಹಿಂದೂ ಧರ್ಮವನ್ನು ಅಪಹಾಸ್ಯ ಮಾಡಲಾಗಿದ್ದಲ್ಲದೇ ಹಿಂದೂಗಳ ಭಾವನೆಗೆ ಧಕ್ಕೆಯುಂಟಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಲಡ್ಡು ತಯಾರಿಕೆಯ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶವಿರುದು ಪತ್ತೆಯಾಗಿದೆ ಎಂದು ವರದಿಯಾಗಿದೆ. ಇದು ಹಿಂದೂಗಳ ಆತ್ಮಸಾಕ್ಷಿಯನ್ನೇ ಅಲುಗಾಡಿಸಿದೆ. ಅವರ ಧಾರ್ಮಿಕ ಭಾವನೆಗಳನ್ನು ಕೆರಳಿಸಿದೆ. ಈ ನಿಟ್ಟಿನಲ್ಲಿ ಪ್ರಕರಣದ ಕುರಿತು ಎಸ್ಐಟಿ ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ.