ನವದೆಹಲಿ: ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ, ಪ್ರಾಣಿಗಳ ಕೊಬ್ಬು ಬಳಕೆ ಪ್ರಕರನಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಧಾರ್ಮಿಕ ಭಾವನೆಗಳಿಗೆ ಗೌರವ ಕೊಡಿ ಎಂದು ತರಾಟೆಗೆ ತೆಗೆದುಕೊಂಡಿದೆ.
ಧಾರ್ಮಿಕ ನಂಬಿಕೆ, ಭಾವನೆಗಳಿಗೆ ಗೌರವ ಕೊಡಬೇಕು. ರಾಜಕೀಯದಿಂದ ದೇವರನ್ನು ದೂರವಿಡಿ. ಕಲಬೆರಿಕೆ ತುಪ್ಪವನ್ನು ಪ್ರಸಾದಕ್ಕೆ ಬಳಸುತ್ತಾರೆಯೇ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸರ್ಕಾರದ ಪರ ವಕೀಲರು ಉತ್ತರಿಸಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಗೌರವ ಕೊಡಬೇಕು. ತಕ್ಷಣ ಸುದ್ದಿಗೋಷ್ಠಿ ನಡೆಸುವ ಅಗತ್ಯವೇನಿತ್ತು? ಕೇಳಿದೆ.
ತಿರುಪತಿ ಪ್ರಸಾದ ಲಡ್ದು ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸುತ್ತಿದ್ದು, ತಿರುಪತಿಗೆ ಭೇಟಿ ನೀಡಿ ಪರಿಶಿಲನೆ ನಡೆಸಿದ್ದು, ತನಿಖೆ ಚುರುಕುಗೊಂಡಿದೆ.