ಬೆಂಗಳೂರು: ತಿರುಪತಿಯಲ್ಲಿ ವಿಶೇಷ ದರ್ಶನ ಮಾಡಿಸುವುದಾಗಿ ಹೇಳಿ ಶಾಸಕ ಶ್ರೀನಿವಾಸ್ ಅವರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನೆಲಮಂಗಲ ಶಾಸಕ ಶ್ರೀನಿವಾಸ್ ಅವರಿಗೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಮಾಜಿ ಆಪ್ತ ಸಹಾಯಕನಾಗಿದ್ದ ಮಾರುತಿ ಎಂಬಾತ 8 ಲಕ್ಷ ರೂಪಾಯಿ ವಂಚಿಸಿದ್ದ ಎಂಬ ಆರೋಪ ಕೇಳಿಬಂದಿತ್ತು.
ಪ್ರಕರಣ ದಾಖಲಿಸಿಕೊಂಡಿದ್ದ ನೆಲಮಂಗಲ ಪೊಲೀಸರು ಇದೀಗ ಆರೋಪಿ ಮಾರುತಿಯನ್ನು ಬಂಧಿಸಿದ್ದಾರೆ.
ಕರ್ನಾಟಕದಿಂದ ಎಸ್.ಆರ್ ವಿಶ್ವನಾಥ್ ಟಿಟಿಡಿಯ ಸದಸ್ಯರಾಗಿದ್ದರಿಂದ ತಿರುಪತಿಯಲ್ಲಿ ತಿಮ್ಮಪ್ಪನ ವಿಶೇಷ ದರ್ಶನಕ್ಕಾಗಿ ಪಾಸ್ ಕೊಡಿಸುವ ಕೆಲಸವನ್ನು ಮಾರುತಿ ಮಾಡುತ್ತಿದ್ದ. ನೆಲಮಂಗಲ ಶಾಸಕ ಶ್ರೀನಿವಾಸ್ ಹಾಗೂ ಅವರ ಆಪ್ತರಿಗೆ ವಿಶೇಷ ದರ್ಶನ ಹೆಸರಲ್ಲಿ ಲಕ್ಷ ಲಕ್ಷ ಹಣ ದೋಚಿ ವಂಚಿಸಿದ್ದ. ಜನವರಿ 14ರಂದು ನೆಲ ಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.