ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಬೈರತಿ ರಣಗಲ್’ ಚಿತ್ರ ಅಂದುಕೊಂಡಂತೆ ಭರ್ಜರಿ ಯಶಸ್ಸು ಕಂಡಿದ್ದು, ಪ್ರೇಕ್ಷಕರ ಮನಮುಟ್ಟುವಲ್ಲಿ ಯಶಸ್ವಿಯಾಗಿದೆ. ಇದರ ಟೈಟಲ್ ಟ್ರ್ಯಾಕ್ ಈಗಾಗಲೇ ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸಿದ್ದು, ಸಂಪೂರ್ಣ ವಿಡಿಯೋ ಹಾಡು ನಿನ್ನೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಸಂತೋಷ್ ವೆಂಕಿ ಈ ಹಾಡಿಗೆ ಧ್ವನಿಯಾಗಿದ್ದು, ರವಿ ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಕಿನ್ನಳರಾಜ್ ಅವರ ಸಾಹಿತ್ಯವಿದೆ.
ನರ್ತನ್ ನಿರ್ದೇಶನದ ಈ ಚಿತ್ರವನ್ನು ಗೀತಾ ಪಿಚ್ಚರ್ಸ್ ಬ್ಯಾನರ್ ನಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಾಣ ಮಾಡಿದ್ದಾರೆ. ಆಕಾಶ್ ಹಿರೇಮಠ ಸಂಕಲನ, ನವೀನ್ ಕುಮಾರ್ ಅವರ ಛಾಯಾಗ್ರಾಹಣವಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಜೋಡಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ.