
ನವದೆಹಲಿ: ಸಂಸತ್ ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಉಚ್ಛಾಟನೆ ಮಾಡಲಾಗಿದೆ.
ಪ್ರಶ್ನೆ ಕೇಳಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ನೈತಿಕ ಸಮಿತಿ ಇಂದು ಲೋಕಸಭೆಗೆ ವರದಿ ಸಲ್ಲಿಸಿತ್ತು. ಈ ವರದಿ ಆಧರಿಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭಾ ಸದಸ್ಯತ್ವದಿಂದ ಉಚ್ಛಾಟಿಸಲು ನಿರ‍್ಣಯ ಕೈಗೊಳ್ಳಲಾಯಿತು.
ಟಿಎಂಸಿ ಸಂಸದೆ ಮಹುವಾ ಅವರನ್ನು ಉಚ್ಛಾಟಿಸುವ ನಿರ್ಣಯ ಕೈಗೊಳ್ಳುತ್ತಿದ್ದಂತೆ ವಿಪಕ್ಷ ಸಂಸದರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಲೋಕಸಭಾ ಕಲಾಪವನ್ನು ಬಹಿಷ್ಕರಿಸಿ ವಿಪಕ್ಷ ನಾಯಕರು ಹೊರ ನಡೆದ ಘಟನೆ ನಡೆದಿದೆ.