
ಹಾಸ್ಯ ನಟ ಚಿಕ್ಕಣ್ಣ ಅಭಿನಯದ ‘ಉಪಾಧ್ಯಕ್ಷ’ ಚಿತ್ರದ ಟ್ರೈಲರ್ ಜನವರಿ 13ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಿಡುಗಡೆ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಲಿದ್ದಾರೆ.
ಡಿ ಎನ್ ಸಿನಿಮಾಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಚಿಕ್ಕಣ್ಣ ಅವರಿಗೆ ಜೋಡಿಯಾಗಿ ಮಲೈಕಾ ವಾಸುಪಾಲ್ ಅಭಿನಯಿಸಿದ್ದು, ರವಿಶಂಕರ್, ಸಾಧು ಕೋಕಿಲ ತೆರೆ ಹಂಚಿಕೊಂಡಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನ ಹಾಗೂ ಶೇಖರ್ ಚಂದ್ರ ಅವರ ಛಾಯಾಗ್ರಹಣವಿದೆ. ಜನವರಿ 26ರಂದು ಈ ಸಿನಿಮಾ ರಾಜ್ಯದಾದ್ಯಂತ ತೆರೆ ಮೇಲೆ ಅಪ್ಪಳಿಸಲಿದೆ.
