alex Certify ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ : ಇಂದು ಈ ಮಾರ್ಗದಲ್ಲಿ `ಸಂಚಾರ’ ಸ್ಥಗಿತ| Namma Metro | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ : ಇಂದು ಈ ಮಾರ್ಗದಲ್ಲಿ `ಸಂಚಾರ’ ಸ್ಥಗಿತ| Namma Metro

ಬೆಂಗಳೂರು: ಎಂ.ಜಿ.ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ಇಂದು ಬೆಳಿಗ್ಗೆ 7 ರಿಂದ 9 ರವರೆಗೆ ಮೆಟ್ರೋ ರೈಲುಗಳ ಸಂಚಾರ ಸ್ಥಗಿತವಾಗಲಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಪ್ರಕಾರ, ಎಸ್ವಿ ರಸ್ತೆ ಮತ್ತು ಇಂದಿರಾನಗರ ನಿಲ್ದಾಣಗಳ ನಡುವಿನ ನಿರ್ವಹಣಾ ಕಾರ್ಯಗಳಿಂದಾಗಿ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ ಇಂದಿರಾನಗರದವರೆಗೆ ಇಂದು ಬೆಳಗ್ಗೆ  9 ಗಂಟೆವರೆಗೆ ನಮ್ಮ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಎಂಜಿ ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ಮೆಟ್ರೋ ಸೇವೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ನೇರಳೆ ಮಾರ್ಗದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿದ್ದು, ಸದರಿ ಕಾರ್ಯವನ್ನು ನಿರ್ವಹಿಸಲು ಎಂ.ಜಿ ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7.00ಗಂಟೆಗೆ ಬದಲಾಗಿ 9.00 ಗಂಟೆಗೆ ಪ್ರಾರಂಭವಾಗಲಿದೆ.

ಬೆಳಗ್ಗೆ 9.00 ಗಂಟೆಯ ನಂತರ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಲಭ್ಯವಿರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...