ಬೆಂಗಳೂರು : ರಾಜ್ಯದ ಮಹಿಳೆಯರ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ ಹಣವನ್ನು ರಾಜ್ಯ ಸರ್ಕಾರ ಜಮಾ ಮಾಡುತ್ತಿದ್ದು, ಹಲವರ ಖಾತೆಗೆ ಹಣ ಜಮಾ ಆಗಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಹಣ ಬಂದಿಲ್ಲ.ಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ.
ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಏನು ಮಾಡಬೇಕು..?
1) ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ ಗಳಲ್ಲಿ ಪರಿಹರಿಸಿಕೊಳ್ಳಬೇಕು.
2) ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇಕೆವೈಸಿ ಮಾಡಿಸಬೇಕು. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬೇಕಾದ್ರೆ ರೇಷನ್ ಕಾರ್ಡ್ ನಲ್ಲಿ ಇರುವ ಪ್ರತಿಯೊಬ್ಬ ಸದಸ್ಯರೂ ಕೂಡ ಈಕೆವೈಸಿ ಮಾಡಿಸಬೇಕು.
3) ಗೃಹ ಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E -KYC , ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ. ಕೆಲವೊಮ್ಮೆ ಖಾತೆಗೆ ಹಣ ಜಮೆಯಾಗಿದ್ದರ ಬಗ್ಗೆ ಮೊಬೈಲ್ಗೆ ಎಸ್ಎಂಎಸ್ ಬರುತ್ತದೆ. ಹಲವು ಬಾರಿ ಎಸ್ಎಂಎಸ್ ಬರುವುದಿಲ್ಲ. ಇಂತಹ ಸಮಯದಲ್ಲಿ ನೀವು ಬ್ಯಾಂಕ್ ನಲ್ಲಿ ಹೋಗಿ ಪಾಸ್ ಬುಕ್ ಚೆಕ್ ಮಾಡಿಸಬೇಕು.
4)ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಇದನ್ನು ಮಾಡದಿದ್ದರೆ ಗೃಹಲಕ್ಷ್ಮಿಯರ ಖಾತೆಗೆ ಹಣ ಬರಲ್ಲ. ಹೀಗಾಗಿ ಕೂಡಲೇ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
5) ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ಗಳಲ್ಲಿ ಪರಿಹರಿಸಿಕೊಳ್ಳಬೇಕು. ನಂತರ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ-ಕೆವೈಸಿ ಅಪ್ಡೇಟ್ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮವಹಿಸಲಾಗುತ್ತದೆ.