alex Certify ಯಜಮಾನಿಯರ ಗಮನಕ್ಕೆ : ತಕ್ಷಣ ಈ ಕೆಲಸ ಮಾಡಿದ್ರೆ ಒಟ್ಟಿಗೆ ಬರಲಿದೆ ‘ಗೃಹಲಕ್ಷ್ಮಿ’ ಹಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಜಮಾನಿಯರ ಗಮನಕ್ಕೆ : ತಕ್ಷಣ ಈ ಕೆಲಸ ಮಾಡಿದ್ರೆ ಒಟ್ಟಿಗೆ ಬರಲಿದೆ ‘ಗೃಹಲಕ್ಷ್ಮಿ’ ಹಣ

ಬೆಂಗಳೂರು : ರಾಜ್ಯದ ಮಹಿಳೆಯರ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ ಹಣವನ್ನು ರಾಜ್ಯ ಸರ್ಕಾರ ಜಮಾ ಮಾಡುತ್ತಿದ್ದು, ಹಲವರ ಖಾತೆಗೆ ಹಣ ಜಮಾ ಆಗಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಹಣ ಬಂದಿಲ್ಲ.

ಗೃಹ ಲಕ್ಷ್ಮಿ ಯೋಜನೆಯ ಹಣ ಯಾರ ಖಾತೆಗೆ ಜಮಾ ಆಗುತ್ತಿಲ್ಲವೋ ಇಲ್ಲಿ ಕೇಳಿ..ಹಲವು ಜನ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದರೂ ಇನ್ನೂ ಕೂಡ ಆಧಾರ್ ಸೀಡಿಂಗ್ ಮಾಡಿಕೊಂಡಿಲ್ಲ. ಆದ್ದರಿಂದ ಗೃಹಲಕ್ಷ್ಮಿ ಯೋಜನೆಯಡಿ ನೊಂದಾಯಿಸಿಕೊಂಡರೂ ಹಣ ಬಾರದ ಫಲಾನುಭವಿಗಳು ಕೂಡಲೇ ಇಕೆವೈಸಿ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಿ.

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೇ ಇದ್ದರೆ, ಆಧಾರ್ ಸೀಡಿಂಗ್ ಮಾಡಿಸದೇ ಇದ್ರೆ ಇಂದೇ ಮಾಡಿಸಿಕೊಳ್ಳಿ. ಅಥವಾ ಪ್ರಸ್ತುತ ಚಾಲ್ತಿಯಲ್ಲಿರುವ ಖಾತೆಯಲ್ಲಿ ಏನಾದರೂ ಸಮಸ್ಯೆ ಇದ್ರೆ ಹೊಸ ಖಾತೆ ತೆರೆದು ಗೃಹಲಕ್ಷ್ಮಿ ಅರ್ಜಿಯಲ್ಲಿ ಅಪ್ ಡೇಟ್ ಮಾಡಿಸಿಕೊಳ್ಳಿ.

ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು ಕೂಡ ಮಹಿಳೆಯರ ಸಮಸ್ಯೆಗೆ ಕೈ ಜೋಡಿಸಲಿದ್ದು, ಅವರ ಜೊತೆ ನಿಂತು ಗೃಹಲಕ್ಷ್ಮಿ ಸಮಸ್ಯೆ ನಿವಾರಿಸಿ ಹಣ ಜಮಾ ಮಾಡಿಕೊಡುವಂತೆ ಸರ್ಕಾರ ಸೂಚನೆ ನೀಡಿದೆ.

ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ ಗಳಲ್ಲಿ ಪರಿಹರಿಸಿಕೊಳ್ಳಬೇಕು.ನೀವು ಕೊಟ್ಟಿರುವ ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಕೆವೈಸಿ ಮಾಡಿಸಬೇಕು. ಅಂದರೆ, ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಆಧಾರ್ ಸೀಡಿಂಗ್ ಅನ್ನು ಮಾಡಿಸಿಕೊಳ್ಳಿ ಆಗ ಹಣ ಜಮೆ ಆಗಲಿದೆ. ಗೃಹ ಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E -KYC , ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ. ಕೆಲವೊಮ್ಮೆ ಖಾತೆಗೆ ಹಣ ಜಮೆಯಾಗಿದ್ದರ ಬಗ್ಗೆ ಮೊಬೈಲ್ಗೆ ಎಸ್ಎಂಎಸ್ ಬರುತ್ತದೆ. ಹಲವು ಬಾರಿ ಎಸ್ಎಂಎಸ್ ಬರುವುದಿಲ್ಲ. ಇಂತಹ ಸಮಯದಲ್ಲಿ ನೀವು ಬ್ಯಾಂಕ್ ನಲ್ಲಿ ಹೋಗಿ ಪಾಸ್ ಬುಕ್ ಚೆಕ್ ಮಾಡಿಸಬೇಕು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...