ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಸದ್ಯ ಪಡಿತರರ ಖಾತೆಗೆ ಸೆಪ್ಟೆಂಬರ್ ತಿಂಗಳ ಹಣ ವರ್ಗಾವಣೆಯಾಗಿದೆ.ಆದರೆ ಇನ್ನೂ ಕೆಲವರಿಗೆ ಹಣ ವರ್ಗಾವಣೆಯಾಗಿಲ್ಲ.
ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸದೇ ಇರುವುದರಿಂದ ಅನ್ನಭಾಗ್ಯದ ಹಣ ತಲುಪಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಬ್ಯಾಂಕ್ ಖಾತೆಗೂ ಆಧಾರ್ ಜೋಡಣೆ ಮಾಡಿಸಬೇಕು, ಹೀಗಾಗಿ ಇಕೆವೈಸಿ ಆಗದ ಫಲಾನುಭವಿಗಳಿಗೆ ಡಿಬಿಟಿ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಪಡಿತರ ಚೀಟಿದಾರರು ತಪ್ಪದೇ ಈ ಕೆಲಸ ಮಾಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬ್ಯಾಂಕ್ ಮಾತ್ರವಲ್ಲ ಅಂಚೆ ಕಚೇರಿಯಲ್ಲಿಯೂ ಖಾತೆ ಆರಂಭಿಸಬಹುದು. ಆ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಹಣ ಡಿಬಿಟಿ ಆಗುತ್ತದೆ .
ಹಣ ಬಂದಿರುವ ಬಗ್ಗೆ ಚೆಕ್ ಮಾಡುವುದು ಹೇಗೆ..?
1) ಆಹಾರ ಇಲಾಖೆಯ ವೆಬ್ ಸೈಟ್ https://ahara.kar.nic.in/ ಲಾಗಿನ್ ಆಗಬೇಕು
2) ಇದರಲ್ಲಿ ಸ್ಟೇಟಸ್ ಆಫ್ ಡಿಬಿಟಿ ಅನ್ನುವ ಆಯ್ಕೆ ಕಾಣಿಸುತ್ತದೆ. ಅದನ್ನು ಆಯ್ಕೆ ಮಾಡಿ.
3) ನಂತರ ನಿಗದಿತ ಕಾಲಂ ನಲ್ಲಿ ರೇಷನ್ ಕಾರ್ಡ್ ನ ನಂಬರ್ ಕೇಳುತ್ತದೆ, ಅಂದ್ರೆ ಆರ್ ಸಿ ನಂಬರ್ನ್ನು ನಮೂದಿಸಿ
4) ನಂತರ ನಿಮ್ಮ ರೇಷನ್ ಕಾರ್ಡ್ ನ ಮೇಲ್ಬಾಗದಲ್ಲಿ ಕಾಣುವ ಆರ್ ಸಿ ನಂಬರ್ ಅನ್ನು ಇಲ್ಲಿ ನಮೂದಿಸಿ ಮುಂದುವರೆಯಿರಿ ಎಂಬ ಆಯ್ಕೆಯನ್ನು ಸೆಲೆಕ್ಟ್ ಮಾಡಿ.
5) ಮುಂದಿನ ಪುಟದಲ್ಲಿ ನಿಮ್ಮ ಅಕೌಂಟ್ಗೆ ಹಣ ಜಮಾ ಆಗಿದ್ಯಾ, ಒಂದೊಮ್ಮೆ ಖಾತೆಗೆ ಹಣ ಬರದಿದ್ದಲ್ಲಿ ಅದು ಯಾವ ಕಾರಣಕ್ಕೆ ಕ್ರೆಡಿಟ್ ಆಗಿಲ್ಲ ಎಂಬ ಮಾಹಿತಿ ನಿಮಗೆ ಸಿಗಲಿದೆ.