ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಕೆಲವರಿಗೆ ಹಣ ಬಂದಿಲ್ಲ. ಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ.
ಇನ್ನೂ ಹಣ ಬಾರದೇ ಇದ್ರೆ ಏನು ಮಾಡಬೇಕು..? ಎಂಬುದನ್ನು ನಿಮಗೆ ತಿಳಿಸುತ್ತಿದ್ದೇವೆ.
1) ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇಕೆವೈಸಿ ಮಾಡಿಸಬೇಕು. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬೇಕಾದ್ರೆ ರೇಷನ್ ಕಾರ್ಡ್ ನಲ್ಲಿ ಇರುವ ಪ್ರತಿಯೊಬ್ಬ ಸದಸ್ಯರೂ ಕೂಡ ಈಕೆವೈಸಿ ಮಾಡಿಸಬೇಕು.
2)ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಇದನ್ನು ಮಾಡದಿದ್ದರೆ ಗೃಹಲಕ್ಷ್ಮಿಯರ ಖಾತೆಗೆ ಹಣ ಬರಲ್ಲ. ಹೀಗಾಗಿ ಕೂಡಲೇ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
3) ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ ಗಳಲ್ಲಿ ಪರಿಹರಿಸಿಕೊಳ್ಳಬೇಕು.
4) ಗೃಹ ಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E -KYC , ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ. ಕೆಲವೊಮ್ಮೆ ಖಾತೆಗೆ ಹಣ ಜಮೆಯಾಗಿದ್ದರ ಬಗ್ಗೆ ಮೊಬೈಲ್ಗೆ ಎಸ್ಎಂಎಸ್ ಬರುತ್ತದೆ. ಹಲವು ಬಾರಿ ಎಸ್ಎಂಎಸ್ ಬರುವುದಿಲ್ಲ. ಇಂತಹ ಸಮಯದಲ್ಲಿ ನೀವು ಬ್ಯಾಂಕ್ ನಲ್ಲಿ ಹೋಗಿ ಪಾಸ್ ಬುಕ್ ಚೆಕ್ ಮಾಡಿಸಬೇಕು.
5) ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ಗಳಲ್ಲಿ ಪರಿಹರಿಸಿಕೊಳ್ಳಬೇಕು. ನಂತರ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ-ಕೆವೈಸಿ ಅಪ್ಡೇಟ್ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮವಹಿಸಲಾಗುತ್ತದೆ.
6) ನೀವು ಕೊಟ್ಟಿರುವ ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಕೆವೈಸಿ ಮಾಡಿಸಬೇಕು. ಅಂದರೆ, ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಆಧಾರ್ ಸೀಡಿಂಗ್ ಅನ್ನು ಮಾಡಿಸಿಕೊಳ್ಳಿ ಆಗ ಹಣ ಜಮೆ ಆಗಲಿದೆ.