ಈ ಬಾರಿಯ ಐಪಿಎಲ್ ಪಂದ್ಯಗಳು ಒಂದಕ್ಕಿಂತ ಒಂದು ರೋಚಕತೆಯಿಂದ ಸಾಗುತ್ತಿದ್ದು, ನಿನ್ನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಓಂ ಗ್ರೌಂಡ್ ನಲ್ಲಿ ಪಂಜಾಬ್ ಕಿಂಗ್ಸ್ ಜೊತೆ ಭರ್ಜರಿ ಜಯ ಸಾಧಿಸಿದೆ. ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ಮುಖಾಮುಖಿಯಾಗಲಿವೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳೆದ ಐಪಿಎಲ್ ಫೈನಲ್ ನಲ್ಲಿ ಗುಜರಾತ್ ಟೈಟನ್ಸ್ ಎದುರು ಜಯಭೇರಿಯಾಗುವ ಮೂಲಕ ತನ್ನ ಐದನೇ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ಇಂದು ಗುಜರಾತ್ ಟೈಟನ್ಸ್ ಕಳೆದ ಐಪಿಎಲ್ ಫೈನಲ್ ನ ಸೇಡನ್ನು ತೀರಿಸಿಕೊಳ್ಳಲಿದೆಯಾ ಕಾದು ನೋಡಬೇಕಾಗಿದೆ. ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಎಂ ಎಸ್ ಧೋನಿ ಅಭಿಮಾನಿಗಳು ಕಿಕ್ಕಿರಿದು ಸೇರಲಿದ್ದಾರೆ.