ನವದೆಹಲಿ: ಗುರುನಾನಕ್ ಜಯಂತಿ ಅಂಗವಾಗಿ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ.
ದೇಶದ ಜನತೆಗೆ ದೇವ್ ದೀಪಾವಳಿ, ಗುರುನಾನಕ್ ಜಯಂತಿಯ ಶುಭಾಶಯಗಳು. ಕರ್ತಾರ್ಪುರ ಕಾರಿಡಾರ್ ಈಗ ಪುನಾರಂಭವಾಗಿದೆ. ಸೇವಾ ಮಾರ್ಗ ಅನುಸರಿಸುವುದರಿಂದ ಜೀವನ ಸಾರ್ಥಕವಾಗುತ್ತದೆ. ರೈತರ ಸಮಸ್ಯೆಯನ್ನು ಬಗೆಹರಿಸುವುದು ಸರ್ಕಾರದ ಪ್ರಾಮುಖ್ಯತೆಯಾಗಿದೆ. ದೇಶದ 100ರಲ್ಲಿ 80 ರೈತರು ಸಣ್ಣ ಹಿಡುವಳಿ ರೈತರಾಗಿದ್ದಾರೆ.ರೈತರ ಸಮಸ್ಯೆ ಅರಿತಿದ್ದೇನೆ ಎಂದು ಹೇಳಿದ್ದಾರೆ.
ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಮೋದಿ ಘೋಷಣೆ ಮಾಡಿದ್ದಾರೆ.
ದೇಶದಲ್ಲಿ ಒಂದು ಕೋಟಿಗಿಂತಲೂ ಅಧಿಕ ಸಣ್ಣ ರೈತರು ಇದ್ದಾರೆ. ಸಣ್ಣ ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಲಾಗಿದೆ. ಬಿತ್ತನೆ ಬೀಜ, ಮಾರುಕಟ್ಟೆ ಉಳಿತಾಯಕ್ಕೆ ಯೋಜನೆ ರೂಪಿಸಲಾಗಿದೆ. ರೈತರಿಗೆ ಫಸಲ್ ಭೀಮಾ ಮತ್ತು ಪೆನ್ಷನ್ ಯೋಜನೆ ಜಾರಿಗೊಳಿಸಲಾಗಿದೆ. ಕೃಷಿ ಮಾರುಕಟ್ಟೆ ಆಧುನಿಕರಣಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದೆ. ರೈತರು ಈಗ ಎಲ್ಲಿ ಬೇಕಾದರೂ ತಮ್ಮ ಬೆಳೆ ಮಾಡಬಹುದಾಗಿದೆ. ಕೃಷಿ ಬಜೆಟ್ ಮೊದಲಿಗಿಂತಲೂ 5 ಪಟ್ಟು ಹೆಚ್ಚಿಸಿದ್ದೇವೆ. ರೈತರಿಗೆ 22 ಕೋಟಿ ಸಾಯಿಲ್ ಹೆಲ್ತ್ ಕಾರ್ಡ್ ನೀಡಿದ್ದೇವೆ ಎಂದರು.
ರೈತರ ಆರ್ಥಿಕ ಸಾಮಾಜಿಕ ಸ್ಥಿತಿಯನ್ನು ಸುಧಾರಿಸಲು ಪ್ರಯತ್ನ ಕೈಗೊಳ್ಳಲಾಗಿದೆ. ರೈತರ ಸ್ಥಿತಿ ಸುಧಾರಿಸಲು 3 ಕಾಯ್ದೆ ಜಾರಿಗೆ ತಂದಿದ್ದೇವೆ. ಸಣ್ಣ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ. ಸಣ್ಣ ರೈತರ ಒಳಿತಿಗಾಗಿಯೇ ಈ ಕಾಯ್ದೆಯನ್ನು ಜಾರಿಗೆ ತಂದಿದ್ದೇವೆ. ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದೆ. ರೈತರ ಹಿತದೃಷ್ಟಿಯಿಂದಲೇ ಈ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ ಎಂದ ಅವರು, ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.
ಎಲ್ಲಾ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಾವು ನಿರ್ಧರಿಸಿದ್ದೇವೆ ಎಂದು ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ರೈತರು ದೇಶಾದ್ಯಂತ ಹೋರಾಟ ಕೈಗೊಂಡಿದ್ದರು. ದೇಶಾದ್ಯಂತ ರೈತರು ನಂತರ ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ಕಾಯ್ದೆಗಳನ್ನು ವಾಪಸ್ ಪಡೆಯಲಾಗಿದೆ. ಪಂಜಾಬ್, ಉತ್ತರ ಪ್ರದೇಶ ಚುನಾವಣೆ ಹಿನ್ನಲೆಯಲ್ಲಿ ಕಾಯ್ದೆ ವಾಪಸ್ ಪಡೆಯಲಾಗಿದೆ ಎನ್ನಲಾಗಿದೆ.