
ಅಶೋಕ್ ಕಡಬ ನಿರ್ದೇಶನದ ಬಹು ನಿರೀಕ್ಷಿತ ‘ಸತ್ಯಂ’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇಂದು ಸಂಜೆ 5-30ಕ್ಕೆ ಗಂಗಾವತಿಯಲ್ಲಿ ನಡೆಯಲಿದೆ. ಈ ಕುರಿತು ನಟಿ ರಂಜನಿ ರಾಘವನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಈ ಸಿನಿಮಾದಲ್ಲಿ ಸಂತೋಷ್ ಬಾಲರಾಜ್ ಹಾಗೂ ರಂಜನಿ ರಾಘವನ್ ಸೇರಿದಂತೆ ಪವಿತ್ರ ಲೋಕೇಶ್, ಅವಿನಾಶ್, ವಿನಯ ಪ್ರಸಾದ್, ಶೃಂಗೇರಿ ರಾಮಣ್ಣ, ಮಂತ್ರಿಮಂತ್ರಿ ಚಂದ್ರು, ಉಮೇಶ್, ತನುಶ್ರೀ, ತೆರೆ ಹಂಚಿಕೊಂಡಿದ್ದಾರೆ.
ಈ ಚಿತ್ರವನ್ನು ಶ್ರೀ ಮಾತಾ ಕ್ರಿಯೇಶನ್ಸ್ ಬ್ಯಾನರ್ ನಲ್ಲಿ ಮಹಾಂತೇಶ್ ನಿರ್ಮಾಣ ಮಾಡಿದ್ದು, ರವಿ ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದಾರೆ.
