ಬೆಂಗಳೂರು : ಇಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಪ್ರಧಾನಿ ಮೋದಿ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನನ್ನ ಶುಭ ಹಾರೈಕೆಗಳು . ನಾವು ಹಲವು ವರ್ಷಗಳಿಂದ ನಿಕಟವಾಗಿ ಸಂವಹನ ನಡೆಸಿದ್ದೇವೆ, ವಿಶೇಷವಾಗಿ ಕರ್ನಾಟಕದ ಪ್ರಗತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ. ಜನರ ಸೇವೆಯಲ್ಲಿ ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ತಮಗೆ ತುಂಬು ಹೃದಯದ ಧನ್ಯವಾದಗಳು ಸರ್. ನಿಮ್ಮ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಚಿರಋಣಿ ಆಗಿದ್ದೇನೆ. ಎಂದು ಪ್ರತಿಕ್ರಿಯೆ ನೀಡಿದ್ದಾರೆ.
https://twitter.com/narendramodi/status/1735967907769970783
https://twitter.com/hd_kumaraswamy/status/1735976319916314835