ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಟಿ20 ಪಂಧ್ಯಗಳು ರೋಚಕತೆಯಿಂದ ಸಾಗುತ್ತಿವೆ, ಈಗಾಗಲೇ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿದ್ದು, ಅಂತಿಮ ಟಿ 20 ಪಂದ್ಯಕ್ಕೆ ಸಜ್ಜಾಗಿವೆ. ಇಂದು ಗೆದ್ದ ತಂಡ ಸರಣಿಯನ್ನು ಕೈವಶ ಮಾಡಿಕೊಳ್ಳಲಿದ್ದು, ಉಭಯ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ಟಿ ಟ್ವೆಂಟಿ ಸರಣಿಯ ಬಳಿಕ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವೆ 5 ಏಕದಿನ ಪಂದ್ಯ ನಡೆಯಲಿದ್ದು, ಈಗಾಗಲೇ ತಂಡಗಳನ್ನು ಪ್ರಕಟಣೆ ಮಾಡಲಾಗಿದೆ. ಐಸಿಸಿ ಟಿ20 ರಾಂಕಿಂಗ್ ನಲ್ಲಿ ಭಾರತ ತಂಡ ನಂಬರ್ ಒನ್ ಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿರುವ ಬಲಿಷ್ಠ ಆಸ್ಟ್ರೇಲಿಯಾ ತಂಡ ಸರಣಿಯನ್ನು ಗೆಲ್ಲುವ ಮೂಲಕ ತಮ್ಮ ಅಂಕವನ್ನು ಹೆಚ್ಚಿಸಿಕೊಳ್ಳುವ ನೀರಿಕ್ಷೆಯಲ್ಲಿದೆ.