alex Certify ಇಂದು ‘ಯುವ’ ಚಿತ್ರದ ಪ್ರೀ ರಿಲೀಸ್ ಈವೆಂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ‘ಯುವ’ ಚಿತ್ರದ ಪ್ರೀ ರಿಲೀಸ್ ಈವೆಂಟ್

ಹೊಸಪೇಟೆಯಲ್ಲಿ 'ಯುವ' ಚಿತ್ರದ 2ನೇ ಸಾಂಗ್ ರಿಲೀಸ್

ಯುವ ರಾಜಕುಮಾರ್ ಅಭಿನಯದ ಸಂತೋಷ್ ಆನಂದ್ ರಾಮ್ ಆಕ್ಷನ್ ಕಟ್ ಹೇಳಿರುವ ಬಹು ನಿರೀಕ್ಷಿತ ಯುವ ಚಿತ್ರ ಇತ್ತೀಚಿಗಷ್ಟೇ ತನ್ನ ಟ್ರೈಲರ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಯುವ ಚಿತ್ರತಂಡ ಇಂದು ಹೊಸಪೇಟೆಯ ಪುನೀತ್ ರಾಜಕುಮಾರ್ ಗ್ರೌಂಡ್ ನಲ್ಲಿ ಪ್ರೀ ರಿಲೀಸ್ ಇವೆಂಟ್  ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗಂದೂರು ಈ ಚಿತ್ರ ನಿರ್ಮಾಣ ಮಾಡಿದ್ದು, ಯುವರಾಜ್ ಕುಮಾರ್ ಜೊತೆ ಸಪ್ತಮಿ ಗೌಡ ನಾಯಕಿಯಾಗಿ ಅಭಿನಯಿಸಿದ್ದಾರೆ. ಅಚ್ಯುತ್ ಕುಮಾರ್, ಸುಧಾರಾಣಿ, ಕಿಶೋರ್ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಆಶಿಕ್ ಸಂಕಲನ, ಶ್ರೀಶಾ ಕುಡುವಳ್ಳಿ ಛಾಯಾಗ್ರಹಣವಿದೆ.

ಇದೇ ಮಾರ್ಚ್ 29ಕ್ಕೆ ಈ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣಲಿದೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...