
ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿಯ ಎರಡನೇ ಪಂದ್ಯ ಇಂದು ಇಂದೋರ್ ನಲ್ಲಿ ನಡೆಯುತ್ತಿದ್ದು, ಸರಣಿ ಕೈವಶ ಮಾಡಿಕೊಳ್ಳಲು ಭಾರತ ಸಜ್ಜಾಗಿದೆ.
ಮೊದಲ ಪಂದ್ಯದಲ್ಲಿ ಐದು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದ್ದ ಕೆ ಎಲ್ ರಾಹುಲ್ ಪಡೆ ತನ್ನ ತವರಿನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರುತ್ತಿದೆ. ಎರಡು ತಂಡಗಳು ಬಲಿಷ್ಠವಾಗಿದ್ದು, ಇಂದಿನ ಪಂದ್ಯ ತುಂಬಾ ರೋಮಾಂಚನಕಾರಿಯಾಗಿರಲಿದೆ.
ಆಸ್ಟ್ರೇಲಿಯಾ ತಂಡಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಆಸ್ಟ್ರೇಲಿಯಾ ಈಗಾಗಲೇ ಒಂದು ಪಂದ್ಯ ಸೋತಿದ್ದು ಇಂದು ಗೆಲ್ಲಲೇ ಬೇಕಾದ ಅನಿವಾರ್ಯತೆಯಿದೆ. ಐಪಿಎಲ್ ಸ್ಟಾರ್ ಆಟಗಾರರಾದ ಋತುರಾಜ್ ಗಾಯಕ್ವಾಡ್ ಹಾಗೂ ಗಿಲ್ ಬ್ಯಾಟಿಂಗ್ ವೀಕ್ಷಿಸಲು ಭಾರತದ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.