ಅಯೋಧ್ಯೆ : ಹಲವು ವರ್ಷಗಳ ಕಾಯುವಿಕೆಯ ನಂತರ ನಮ್ಮ ರಾಮ ಬಂದಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ಅಯೋಧ್ಯೆ ರಾಮಮಂದಿರ ಪ್ರತಿಷ್ಟಾಪನೆ ಬಳಿಕ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ರಾಮ್ ಲಲ್ಲಾ ಇನ್ನು ಮುಂದೆ ಟೆಂಟ್ ನಲ್ಲಿ ವಾಸಿಸಬೇಕಾಗಿಲ್ಲ, ಅವರು ಭವ್ಯವಾದ ದೇವಾಲಯದಲ್ಲಿ ವಾಸಿಸುತ್ತಾರೆ” ಎಂದು ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ಹೇಳಿದರು.
ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ. ಈ ಶುಭ ಘಳಿಗೆ ಹಿನ್ನೆಲೆ ಎಲ್ಲರಿಗೂ ಶುಭಾಶಯ. ಹೇಳಲು ಎಷ್ಟೊಂದು ವಿಷಯಗಳು ಇವೆ. ಆದರೆ, ಮಾತುಗಳೇ ಹೊರಳದೇ ನನ್ನ ಕಂಠ ತುಂಬಿ ಬರುತ್ತಿದೆ ಎಂದರು. ಈ ಕ್ಷಣ ಅತ್ಯಂತ ಪವಿತ್ರವಾದದ್ದು. 2024 ರ ಜನವರಿ 22 ಇದು ಕೇವಲ ದಿನಾಂಕ ಅಲ್ಲ, ಹೊಸ ಕಾಲಚಕ್ರದ ಉದಯ ಎಂದು ಮೋದಿ ಹೇಳಿದರು.