
ನಿನ್ನೆ ನಡೆದ ಐಪಿಎಲ್ ನ 8ನೇ ಪದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್ ಎದುರು 277 ರನ್ ಬಾರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಆರ್‌ಸಿಬಿ ತಂಡದ ದಾಖಲೆಯನ್ನು ಸರಿಗಟ್ಟಿದೆ. ಮತ್ತೊಂದೆಡೆ ಒಂದೇ ತಂಡದ ನಾಲ್ಕು ಬ್ಯಾಟ್ಸ್ಮನ್ಗಳು ಅರ್ಧಶತಕ ಗಳಿಸಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ತಂಡದ ಈ ಸಾಧನೆಗೆ ಹಲವಾರು ಹಿರಿಯ ಕ್ರಿಕೆಟಿಗರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಇಂದು ಜೈಪುರ್ ನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಮುಖಿಯಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಮತ್ತೊಂದು ರೋಮಾಂಚನಕಾರಿ ಪಂದ್ಯವನ್ನು ಸವಿಯಲು ಸಜ್ಜಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡ ಈಗಾಗಲೇ ತನ್ನ ಮೊದಲ ಪಂದ್ಯದಲ್ಲಿ ಜಯಭೇರಿಯಾಗಿದ್ದರೆ, ಕಳೆದ ಪಂದ್ಯದಲ್ಲಿ ಸೋಲು ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಮೊದಲ ಜಯದ ಹುಡುಕಾಟದಲ್ಲಿದೆ.