
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಐಪಿಎಲ್ ನಲ್ಲಿ ಆಡಿರುವ 6 ಪಂದ್ಯಗಳಲ್ಲಿ ಐದು ಬಾರಿ ಸೋಲು ಕಾಣುವ ಮೂಲಕ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆ ಮೂಡಿಸಿದೆ.
ಇದು ಆರ್‌ಸಿಬಿಯ ಹೊಸ ಅಧ್ಯಾಯ ಎಂದಿದ್ದ ತಂಡಕ್ಕೆ ಈ ಬಾರಿಯೂ ಅಂದುಕೊಂಡಂತೆ ನಡೆದಿಲ್ಲ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಆರ್ಸಿಬಿ ಮತ್ತು ಬಲಿಷ್ಠ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.
ಐಪಿಎಲ್ ನ 30ನೇ ಪಂದ್ಯ ಇದಾಗಿದ್ದು, ಆರ್‌ಸಿಬಿ ತಂಡಕ್ಕೆ ಗೆಲ್ಲಲೇಬೇಕಾದ ಅನಿವಾರ್ಯವಿದೆ. ಮುಂಬರುವ ಎಲ್ಲಾ ಪಂದ್ಯಗಳಲ್ಲೂ ಜಯಭೇರಿ ಆದರೆ ಆರ್‌ಸಿಬಿ ತಂಡಕ್ಕೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಸಿಗಲಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಬಾರಿ ಐಪಿಎಲ್ ನಲ್ಲಿ ಆರ್ಸಿಬಿ ಹೆಸರಿನಲ್ಲಿದ್ದ ದೊಡ್ಡ ಮೊತ್ತದ ದಾಖಲೆಯನ್ನು ಮುರಿದಿದ್ದು, ಹೊಸ ರೀತಿಯಲ್ಲೇ ಕಾಣಿಸಿಕೊಂಡಿದೆ.