ಬೆಂಗಳೂರು: ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಇಂದಿನಿಂದ ಹೊಸ ಸೆಕ್ಷನ್ ಗಳಡಿ ಕೇಸ್ ದಾಖಲಿಸಲಾಗುತ್ತದೆ. ದೇಶಾದ್ಯಂತ ಇಂದಿನಿಂದ ಹೊಸ ಕಾನೂನು ಜಾರಿಗೆ ಬರಲಿದೆ. ಭಾರತೀಯ ನ್ಯಾಯ ಸಂಹಿತೆ, ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ಸಾಕ್ಷ್ಯ ಕಾಯ್ದೆಗಳ ಕಲಂಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗುತ್ತದೆ.
ದೇಶಾದ್ಯಂತ ಹೊಸ ಕಾಯ್ದೆ ಜಾರಿಯಾಗುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅವುಗಳ ಅನುಷ್ಠಾನವಾಗಲಿದೆ. ಈಗಾಗಲೇ ರಾಜ್ಯದ ಪೊಲೀಸರು, ಅಧಿಕಾರಿಗಳಿಗೆ ಹೊಸ ಕಾಯ್ದೆ ಮತ್ತು ಕಲಂಗಳ ಬಗ್ಗೆ ತರಬೇತಿ ನೀಡಲಾಗಿದೆ. ಹೊಸ ಕಾಯ್ದೆಗಳ ಬಗ್ಗೆ ರಾಜ್ಯ ಪೊಲೀಸ್ ಇಲಾಖೆಯ ವೆಬ್ಸೈಟ್‌ನಲ್ಲಿಯೂ ಮಾಹಿತಿ ನೀಡಲಾಗುತ್ತಿದೆ.
ಇಂದಿನಿಂದ ರಾಜ್ಯದ ಪೋಲಿಸ್ ಠಾಣೆಗಳಿಗೆ ಬರುವ ದೂರುಗಳ ಸಂಬಂಧ ಪೊಲೀಸರು ಹೊಸ ಕಾಯ್ದೆಗಳ ಕಲಂಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗುತ್ತಾರೆ. ಬಳಿಕ ತನಿಖೆ ನಡೆಸಿ ನ್ಯಾಯಾಲಯಗಳಿಗೆ ದೋಷಾರೋಪ ಪಟ್ಟಿ ಸಲ್ಲಿಸಲಿದ್ದಾರೆ.