alex Certify BIG NEWS : ಇಂದು ವಿಜಯ್ ರಾಘವೇಂದ್ರ ಪತ್ನಿ ‘ಸ್ಪಂದನಾ’ ಉತ್ತರಕ್ರಿಯೆ ವಿಧಿವಿಧಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಇಂದು ವಿಜಯ್ ರಾಘವೇಂದ್ರ ಪತ್ನಿ ‘ಸ್ಪಂದನಾ’ ಉತ್ತರಕ್ರಿಯೆ ವಿಧಿವಿಧಾನ

ಬೆಂಗಳೂರು : ಸ್ಯಾಂಡಲ್ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ಅಸ್ತಿ ವಿಸರ್ಜನೆ ಕಾರ್ಯ ನಡೆದಿದೆ.

ಈಡಿಗ ಪದ್ಧತಿಯಂತೆ 5 ನೇ ದಿನದ ಕಾರ್ಯ, ಅಸ್ತಿ ವಿಸರ್ಜನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಅಸ್ತಿ ವಿಸರ್ಜನೆಗೂ ಮುನ್ನ ವಿಜಯರಾಘವೇಂದ್ರ ಕುಟುಂಬಸ್ಥರು ಹಾಗೂ ಬಿ.ಕೆ. ಶಿವರಾಂ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.

ಇಂದ ಬೆಳಿಗ್ಗೆ 8:00 ರಿಂದ ಸ್ಪಂದನಾ ಸ್ವಗೃಹದಲ್ಲಿ ಶಾಂತಿ ಹೋಮ ನಡೆಯುತ್ತಿದೆ. ನಂತರ 11:30ರ ನಂತರ ಕೋದಂಡರಾಮಪುರದ ಯಂಗ್ಸ್ಟರ್ಸ್ ಕಬಡ್ಡಿ ಆಟದ ಮೈದಾನದಲ್ಲಿ ಭೋಜನ ಆರಂಭವಾಗಲಿದೆ. ಬೆಂಗಳೂರಿನ ಮಲ್ಲೇಶ್ವರಂನ ಬಿಬಿಎಂಪಿ ಆಟದ ಮೈದಾನದಲ್ಲಿ ಎಲ್ಲರಿಗೂ ಭೋಜನ ವ್ಯವಸ್ಥೆ ಮಾಡಲಾಗಿದೆ. ಸುಮಾರು 4000 ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ವಿಐಪಿ- ಸಾರ್ವಜನಿಕರಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದೆ.
ಆಗಸ್ಟ್ 6ರಂದು ಭಾನುವಾರದಂದು ಹೃದಯಾಘಾತದಿಂದ ಸ್ಪಂದನಾ ವಿಧಿವಶರಾದರು. ಆಗಸ್ಟ್ 9ರಂದು ಹರಿಶ್ಚಂದ್ರ ಘಾಟ್ನಲ್ಲಿ ಸ್ಪಂದನಾರ ಅಂತಿಮ ಸಂಸ್ಕಾರ ನಡೆಯಿತು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...