ಉತ್ತರ ಪ್ರದೇಶದ ನೋಯ್ಡಾದಲ್ಲಿ ಸೋಮವಾರ ಸಂಜೆ ಕಾರ್ಮಿಕನೊಬ್ಬನ ಏಳು ತಿಂಗಳ ಮಗುವನ್ನು ಬೀದಿ ನಾಯಿ ಕೊಂದು ಹಾಕಿರುವ ಆಘಾತಕಾರಿ ಘಟನೆ ನಡೆದಿದೆ.
ಬೀದಿ ನಾಯಿ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಐಸಿಯುಗೆ ದಾಖಲಿಸಲಾಗಿತ್ತು. ನೋಯ್ಡಾದ ಯಥಾರ್ಥ್ ಆಸ್ಪತ್ರೆಯಲ್ಲಿ ಮಗುವಿಗೆ ಶಸ್ತ್ರಚಿಕಿತ್ಸೆ ಮಾಡಬೇಕಾಗಿತ್ತು, ಅದರೆ ಯಶಸ್ವಿಯಾಗಲಿಲ್ಲ. ರಾತ್ರಿಯಿಡೀ ಚಿಂತಾಜನಕ ಸ್ಥಿತಿಯಲ್ಲಿದ್ದ ಮಗು ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಈ ಪ್ರದೇಶದಲ್ಲಿ ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದು, ಇದರಿಂದಾಗಿ ಕಾರ್ಮಿಕ ತನ್ನ 7 ತಿಂಗಳ ಮಗುವಿನೊಂದಿಗೆ ಇದ್ದ ಎಂದು ಸ್ಥಳೀಯರು ಹೇಳಿದ್ದಾರೆ. ಮೃತದೇಹವನ್ನು ಸಂತ್ರಸ್ತೆಯ ಪೋಷಕರಿಗೆ ಹಸ್ತಾಂತರಿಸಲಾಗಿದ್ದು, ಮೂಲತಃ ಮಧ್ಯಪ್ರದೇಶದ ಸಿಂಗ್ರೌಲಿಯವರಾದ ಇವರುಗಳು ಅಂತ್ಯಸಂಸ್ಕಾರಕ್ಕಾಗಿ ಅಲ್ಲಿಗೆ ತೆರಳಿದ್ದಾರೆ.