ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆ ಈ ಹಿಂದೆಯೂ ನಾವು ಹೇಳಿದ್ದೇವೆ. ಬಹಳ ವರ್ಷಗಳಿಂದ ಪ್ರತ್ಯೇಕ ಸಚಿವಾಲಯದ ಬೇಡಿಕೆ ಇದೆ. ಈ ಬಗ್ಗೆ ಕ್ರಮ ವಹಿಸಲಾಗಿದೆ. ತೊಗರಿ ಬೆಳೆಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸುವಂತೆ ರೈತರ ಬೇಡಿಕೆ ಇದ್ದು, ತೊಗರಿ ಬೆಳೆ ಸ್ಥಿತಿಗತಿ ವರದಿ ಕೇಳಿದ್ದೇವೆ. ವರದಿ ಬಂದ ನಂತರ ಆ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಆರೋಗ್ಯ ವ್ಯವಸ್ಥೆಯಲ್ಲಿ ಜಯದೇವ ಆಸ್ಪತ್ರೆ ಮಹತ್ವದ್ದಾಗಿದೆ. ಮಲ್ಲಿಕಾರ್ಜುನ ಖರ್ಗೆಯವರ ಹೋರಾಟದ ಫಲವಾಗಿ 371 ಜೆ ಜಾರಿಯಾಗಿದೆ. 371 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಉದ್ಘಾಟಿಸಿದ್ದೇವೆ ಕಲಬುರಗಿ ಏರ್ಪೋರ್ಟ್ ನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.