ಶಿವಮೊಗ್ಗ: ಶಾಲೆಯಲ್ಲಿ ಮಕ್ಕಳು ಶೌಚಾಲಯ ಸ್ವಚ್ಛ ಮಾಡುವುದರಲ್ಲಿ ತಪ್ಪೇನಿದೆ? ಮಕ್ಕಳಲ್ಲಿ ಸ್ವಚ್ಛತೆಯ ಅರಿವು ಮೂಡಿಸುವುದು ಬೇಡವೇ ಎಂದು ಶಾಸಕ ಆರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ.
ತೀರ್ಥಹಳ್ಳಿಯ ಗಾಯತ್ರಿ ಮಂದಿರದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಶಾಖೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿ, ಶಾಲೆಯ ಪರಿಸರವನ್ನು ಸ್ವಚ್ಛ ಮಾಡುವ ಪ್ರವೃತ್ತಿ ಮಕ್ಕಳಲ್ಲಿ ಬೆಳೆದಾಗ ಜೀವನದ ಮೌಲ್ಯ ತಿಳಿಯಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಹಿಂದೆ ನಾವು ಶಾಲೆಯಲ್ಲಿ ಶಿಕ್ಷಕರೊಂದಿಗೆ ಸೇರಿ ಕಸ ಗುಡಿಸುವುದು, ಶೌಚಾಲಯ ತೊಳೆಯುವ ಕೆಲಸ ಮಾಡುತ್ತಿದ್ದೆವು. ಈಗ ಶೌಚಾಲಯ ಸ್ವಚ್ಛತೆ ಅಪರಾಧವಾಗಿದೆ. ಶೌಚಾಲಯ ಸ್ವಚ್ಛದ ಮಾಡುವುದರಲ್ಲಿ ತಪ್ಪೇನಿದೆ? ಮಕ್ಕಳು ಶೌಚಗುಂಡಿ ಸ್ವಚ್ಛ ಮಾಡುವುದನ್ನು ವಿರೋಧಿಸಬೇಕು ಎಂದು ಹೇಳಿದ್ದಾರೆ.