ಬೆಳಗಾವಿ : ಟಿಪ್ಪು ಸುಲ್ತಾನ್ ಹೆಸರನ್ನು ಶೌಚಾಲಯಗಳಿಗೆ ಇಡಬೇಕು ಎಂದು ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ‘ ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ್ ಒಡೆಯರ್ ಹೆಸರಿಡಬೇಕು, ಟಿಪ್ಪುವಿನ ಹೆಸರನ್ನು ಶೌಚಾಲಯಗಳಿಗೆ ಇಡಬೇಕು ಎಂದು ಯತ್ನಾಳ್ ವಾಗ್ದಾಳಿ ನಡೆಸಿದರು, ದೇವಸ್ಥಾನಗಳನ್ನು ಧ್ವಂಸ ಮಾಡಿದ ಟಿಪ್ಪು ಸುಲ್ತಾನ್ ಹೆಸರನ್ನು ಶೌಚಾಲಯಕ್ಕೆ ಇಡಬೇಕೆ ಹೊರತು ವಿಮಾನ ನಿಲ್ದಾಣಕ್ಕೆ ಅಲ್ಲ’ ಎಂದು ಕುಟುಕಿದರು.
ಇದೇ ವೇಳೆ 10 ಖರ್ಗೆಗಳು ಬಂದರೂ ಸಾವರ್ಕರ್ ಫೋಟೋ ತೆಗೆಯಲು ಆಗುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಯತ್ನಾಳ್ ತಿರುಗೇಟು ನೀಡಿದರು.ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಪ್ರಸ್ತಾಪಕ್ಕೆ ಬಿಜೆಪಿ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲು ನಾನು ಪ್ರಸ್ತಾಪಿಸುತ್ತೇನೆ ಎಂದು ಅಬ್ಬಯ್ಯ ಹೇಳಿದ್ದು, ಇದಕ್ಕೆ ಬಿಜೆಪಿ ಶಾಸಕರು ತೀವ್ರವಾಗಿ ಕಿಡಿಕಾರಿದರು.