ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ಗೆದ್ದು ಬೀಗಿದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಟೋಕಿಯೋ ಒಲಿಂಪಿಕ್ಸ್ನಲ್ಲಿ ಸೆಮಿಫೈನಲ್ಗೆ ಲಗ್ಗೆ ಇಟ್ಟಿದ್ದಾರೆ. ಕ್ವಾರ್ಟರ್ ಫೈನಲ್ನಲ್ಲಿ ಎದುರಾಳಿ ಜಪಾನ್ನ ಅಕಾನೆ ಯಮಗುಚಿ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆಲುವು ತಮ್ಮದಾಗಿಸಿಕೊಳ್ಳುವ ಮೂಲಕ ಭಾರತಕ್ಕೆ ಇನ್ನೊಂದು ಪದಕ ಖಚಿತಗೊಳಿಸಿದ್ದಾರೆ.
ಜಪಾನ್ ಬ್ಯಾಡ್ಮಿಂಟನ್ ಆಟಗಾರ್ತಿ ಅಕಾನೆ ಯಮಗುಚಿ ವಿರುದ್ಧ ಪಿ.ವಿ ಸಿಂಧು 2-0 ಅಂತರದಲ್ಲಿ ಗೆಲವು ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲಿ 21-13 ಹಾಗೂ ಎರಡನೇ ಸುತ್ತಿನಲ್ಲಿ 22-20 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಪಿ.ವಿ ಸಿಂಧು ಸೆಮಿಫೈನಲ್ಗೆ ಲಗ್ಗೆ ಇಟ್ಟಿದ್ದಾರೆ.