
125 ವರ್ಷಗಳ ಒಲಿಂಪಿಕ್ಸ್ ಇತಿಹಾಸದಲ್ಲಿ ಮೊದಲ ಬಾರಿಗೆ, ಭಾರತ ಅಥ್ಲೆಟಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಿದೆ. ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ದೇಶಕ್ಕೆ ಚಿನ್ನ ತಂದುಕೊಟ್ಟಿದ್ದಾರೆ. 125 ವರ್ಷಗಳ ನಂತ್ರ ಭಾರತೀಯರ ಕನಸು ನನಸಾಗಿದೆ. ಟೋಕಿಯೊ ಒಲಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋನಲ್ಲಿ ನೀರಜ್ ಸ್ವರ್ಣ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಭಾರತಕ್ಕೆ ಒಲಂಪಿಕ್ಸ್ ನಲ್ಲಿ 13 ವರ್ಷಗಳ ನಂತ್ರ ಚಿನ್ನದ ಪದಕ ಸಿಕ್ಕಿದೆ. ನೀರಜ್ ಚೋಪ್ರಾ ಮೊದಲು, ಅಭಿನವ್ ಬಿಂದ್ರಾ ಬೀಜಿಂಗ್ ಒಲಿಂಪಿಕ್ಸ್ ನ ಶೂಟಿಂಗ್ ನಲ್ಲಿ ಚಿನ್ನದ ಪದಕ ಗೆದ್ದಿದ್ದರು. ಇದು ಒಲಿಂಪಿಕ್ಸ್ ನಲ್ಲಿ ಭಾರತದ ಎರಡನೇ ಚಿನ್ನದ ಪದಕವಾಗಿದೆ. ಈ ಹಿಂದೆ ಭಾರತ ಹಾಕಿಯಲ್ಲಿ ಚಿನ್ನದ ಪದಕಗಳನ್ನು ಗೆದ್ದಿತ್ತು.
ನೀರಜ್ ಗೆಲುವನ್ನು ಇಡೀ ದೇಶವೇ ಸಂಭ್ರಮಿಸುತ್ತಿದೆ. ದೇಶದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ,ರಾಷ್ಟ್ರಪತಿ ಸೇರಿದಂತೆ ಗಣ್ಯರು ನೀರಜ್ ಮಿಶ್ರಾಗೆ ಶುಭ ಕೋರಿದ್ದಾರೆ.