ರಾಮನಗರ: ಬೆಂಗಳೂರು -ಮೈಸೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟನೆ ಮಾಡಿದ್ದಾರೆ. ಈ ಹೆದ್ದಾರಿಯಲ್ಲಿ ಸಾರ್ವಜನಿಕ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ಸದ್ಯಕ್ಕೆ ಟೋಲ್ ಸಂಗ್ರಹದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಹಿಂದೆ ಹೆದ್ದಾರಿ ಉದ್ಘಾಟನೆಗೆ ಮೊದಲೇ ಟೋಲ್ ಸಂಗ್ರಹಕ್ಕೆ ಹೆದ್ದಾರಿ ಪ್ರಾದಿಕಾರ ಮುಂದಾಗಿತ್ತು. ಇದಕ್ಕೆ ತೀವ್ರ ವಿರೋಧ, ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಟೋಲ್ ಶುಲ್ಕ ಸಂಗ್ರಹ ಮುಂದೂಡಲಾಗಿತ್ತು.
ನಿನ್ನೆಯಷ್ಟೇ ಪ್ರಧಾನಿಯವರಿಂದ ಹೆದ್ದಾರಿ ಉದ್ಘಾಟನೆಯಾಗಿದ್ದು, ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಶುಲ್ಕ ಸಂಗ್ರಹಕ್ಕೆ ಅನುಮೋದನೆ ನೀಡಿದ ನಂತರ ಟೋಲ್ ಸಂಗ್ರಹದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.