ಬೆಂಗಳೂರು: ನಾಳೆಯಿಂದ ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಿಸಲಾಗುತ್ತದೆ. ನೂತನ ಬೆಂಗಳೂರು -ಮೈಸೂರು ದಶಪಥ ಹೆದ್ದಾರಿಯಲ್ಲಿ ಮಾರ್ಚ್ 1 ರಿಂದ ಟೋಲ್ ಸಂಗ್ರಹಿಸಲು ನಿರ್ಧರಿಸಲಾಗಿತ್ತು.
ಉದ್ಘಾಟನೆಗೆ ಮೊದಲೇ ಟೋಲ್ ಸಂಗ್ರಹಕ್ಕೆ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಸಂಗ್ರಹಕ್ಕೆ ಬ್ರೇಕ್ ಹಾಕಿತ್ತು.
ಸದ್ಯ ಮಾರ್ಚ್ 14 ರಿಂದ ಟೋಲ್ ಸಂಗ್ರಹಕ್ಕೆ ಪ್ರಾಧಿಕಾರ ಮುಂದಾಗಿದ್ದು, ಬೆಂಗಳೂರಿನಿಂದ ನಿಡಘಟ್ಟದವರೆಗೂ ಟೋಲ್ ಸಂಗ್ರಹಿಸಲಾಗುತ್ತದೆ. 56 ಕಿ.ಮೀ ರಸ್ತೆಗೆ ನಾಳೆಯಿಂದ ಟೋಲ್ ಸಂಗ್ರಹಿಸಲಾಗುವುದು. ವಿರೋಧದ ನಡುವೆ ನಾಳೆ ಟೋಲ್ ಸಂಗ್ರಹಣೆ ಮಾಡಲಾಗುವುದು ಎಂದು ಹೇಳಲಾಗಿದೆ.
ನಿನ್ನೆಯಷ್ಟೇ ಪ್ರಧಾನಿಯವರಿಂದ ಹೆದ್ದಾರಿ ಉದ್ಘಾಟನೆಯಾಗಿದ್ದು, ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಸಭೆ ನಡೆಸಿ ನಾಳೆಯಿಂದ ಟೋಲ್ ಸಂಗ್ರಹಕ್ಕೆ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.