alex Certify ಕೊರೋನಾ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ…? ಶಂಕಿತ ಟೊಮ್ಯಾಟೊ ವೈರಸ್ ಪತ್ತೆ, ಕಟ್ಟೆಚ್ಚರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ…? ಶಂಕಿತ ಟೊಮ್ಯಾಟೊ ವೈರಸ್ ಪತ್ತೆ, ಕಟ್ಟೆಚ್ಚರ

ಬೆಂಗಳೂರು: ಕೊರೋನಾ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ ಕೊಟ್ಟಿದ್ದು, ಕೇರಳದಲ್ಲಿ ಕಂಡುಬಂದ ಮಹಾಮಾರಿ ರಾಜ್ಯಕ್ಕೂ ಪ್ರವೇಶಿಸಿರುವ ಶಂಕೆ ವ್ಯಕ್ತವಾಗಿದೆ.

ನಾಲ್ಕು ವರ್ಷದ ಮಗುವಿಗೆ ಶಂಕಿತ ಟೊಮ್ಯಾಟೊ ಜ್ವರ ತಗುಲಿರುವ ಶಂಕೆ ವ್ಯಕ್ತವಾಗಿದೆ. ಕೇರಳ ಗಡಿಭಾಗದ ಉಡುಪಿ ಜಿಲ್ಲೆಯಲ್ಲಿ ಟೊಮ್ಯಾಟೊ ವೈರಸ್ ಕಂಡುಬಂದಿದ್ದು, ಸೋಂಕಿತ ಮಗುವನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಂಕಿತ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗದಲ್ಲಿ ನಿಗಾವಹಿಸಲಾಗಿದೆ ಎಂದು ಹೇಳಲಾಗಿದೆ.

ಮಕ್ಕಳಲ್ಲಿ ಶಂಕಿತ ಟೊಮ್ಯಾಟೊ ವೈರಸ್ ಕಾಣಿಸಿಕೊಂಡಿದೆ. ಆದರೆ, ಆತಂಕಪಡುವ ಅಗತ್ಯವಿಲ್ಲ. ಶಂಕಿತ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪ್ರಕರಣಗಳು ಕಂಡುಬಂದಲ್ಲಿ ಚಿಕಿತ್ಸೆ ನೀಡಲು ಆದೇಶ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...