alex Certify ಜನ ಸಾಮಾನ್ಯರಿಗೆ ಬಿಗ್ ಶಾಕ್: ದಾಖಲೆ ಬರೆದ ಟೊಮೆಟೊ ದರ ಕೆಜಿಗೆ 150 ರೂ.ವರೆಗೂ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನ ಸಾಮಾನ್ಯರಿಗೆ ಬಿಗ್ ಶಾಕ್: ದಾಖಲೆ ಬರೆದ ಟೊಮೆಟೊ ದರ ಕೆಜಿಗೆ 150 ರೂ.ವರೆಗೂ ಏರಿಕೆ

ಬೆಂಗಳೂರು: ಭಾರೀ ಮಳೆಯ ಕಾರಣ ಹೊಲದಲ್ಲಿಯೇ ಟೊಮೋಟೊ ಸೇರಿ ವಿವಿಧ ಬೆಳೆ ಹಾಳಾಗಿದ್ದು, ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ಟೊಮೇಟೊ ಪೂರೈಕೆಯಾಗುತ್ತಿದೆ. ಇದರ ಪರಿಣಾಮ ಟೊಮೆಟೊ ದರ ದಿಢೀರ್ ಏರಿಕೆ ಕಂಡಿದೆ. ಚಿಲ್ಲರೆ ಮಳಿಗೆಗಳಲ್ಲಿ ಒಂದು ಕೆಜಿಗೆ 150 ರೂ. ನಂತೆ ಮಾರಾಟವಾಗಿದೆ.

ಕಳೆದ 15 -20 ದಿನಗಳಿಂದ ಟೊಮೆಟೊ ದರ ಏರುಗತಿಯಲ್ಲಿ ಸಾಗುತ್ತಿದೆ. ಚಿಲ್ಲರೆ ಮಳಿಗೆಗಳಲ್ಲಿ ಕೆಜಿಗೆ 100 ರೂ.ವರೆಗೂ ತಲುಪಿದ್ದ ದರ ನಂತರ 125 ರೂ.ಗೆ ಈಗ 150 ರೂ.ಗೆ ಏರಿಕೆಯಾಗಿದೆ. ಟೊಮೆಟೊ ಮಾತ್ರವಲ್ಲ, ಬಹುತೇಕ ಎಲ್ಲ ತರಕಾರಿಗಳ ದರ ಕೂಡ ಏರಿಕೆಯಾಗಿದೆ. ತರಕಾರಿ ದರ 50 ರಿಂದ 80 ರೂ.ವರೆಗೆ ಇದ್ದು, ಸೊಪ್ಪಿನ ದರ ಹೆಚ್ಚಳವಾಗಿದೆ. ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ತರಕಾರಿ ಬೆಲೆ ಭಾರಿ ಏರಿಕೆಯಾಗುತ್ತಿರುವುದು ಗ್ರಾಹಕರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...