ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನಾಳೆ ಮಹತ್ವದ ದಿನವಾಗಿದೆ. ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸಿಬಿಐ ತನಿಖೆಯ ಭವಿಷ್ಯ ನಿರ್ಧಾರವಾಗಲಿದೆ.
ನಾಳೆ ಹೈಕೋರ್ಟ್ ವಿಭಾಗೀಯ ಪೀಠದಿಂದ ತೀರ್ಪು ಹೊರಬೀಳಲಿದೆ. ಸಿಬಿಐ ತನಿಖೆಗೆ ನೀಡಿದ ಸಮ್ಮತಿಯನ್ನು ಸರ್ಕಾರ ಹಿಂಪಡೆದುಕೊಂಡಿತ್ತು. ಸಿಬಿಐ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರದ ಕ್ರಮ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ನಾಳೆ ಹೈಕೋರ್ಟ್ ವಿಭಾಗಿಯ ಪೀಠದಿಂದ ತೀರ್ಪು ಪ್ರಕಟಿಸಲಾಗುವುದು.
ಒಂದು ವೇಳೆ ಸಿಬಿಐ ತನಿಖೆಗೆ ಅಸ್ತು ಎಂದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ.