alex Certify ನಾಳೆ ‘ಗೋಲ್ಡನ್ ಸ್ಟಾರ್’ ಗಣೇಶ್ ಹುಟ್ಟುಹಬ್ಬ ; ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ ನಟ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ‘ಗೋಲ್ಡನ್ ಸ್ಟಾರ್’ ಗಣೇಶ್ ಹುಟ್ಟುಹಬ್ಬ ; ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ ನಟ..!

ಬೆಂಗಳೂರು : ನಾಳೆ (ಜು.2) ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ, ಈ ಹಿನ್ನೆಲೆ ಅಭಿಮಾನಿಗಳಿಗೆ ನಟ ಗಣೇಶ್ ವಿಶೇಷ ಮನವಿ ಮಾಡಿದ್ದಾರೆ.

‘’ನನ್ನ ಆತ್ಮೀಯ ಅಭಿಮಾನಿಗಳೇ, ಜುಲೈ 2 ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯವಿಲ್ಲ. ಅದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ. ಹೀಗಾಗಿ ನನ್ನ ಪ್ರೀತಿಯ ಅಭಿಮಾನಿಗಳು ಮನೆಯ ಬಳಿ ಬಾರದೇ ತಾವು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವದಿಸಿ. ಮುಂದಿನ ವರ್ಷ ಖಂಡಿತ ಒಟ್ಟಿಗೆ ಹುಟ್ಟುಹಬ್ಬ ಆಚರಿಸೋಣ. ಅನಾನುಕೂಲಕ್ಕೆ ಕ್ಷಮೆಯಿರಲಿ’’ ಎಂದು ಸೋಶಿಯಲ್ ಮೀಡಿಯಾದಲ್ಲಿ ನಟ ಗಣೇಶ್ ಪೋಸ್ಟ್ ಹಂಚಿಕೊಂಡಿದ್ದಾರೆ.

ಯೋಗರಾಜ್ ಭಟ್ ನಿರ್ದೇಶನದ ಮುಂಗಾರು ಮಳೆ ಸಿನಿಮಾದ ಮೂಲಕ ನಟ ಗಣೇಶ್ ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದರು. ನಂತರ ಸಾಲು ಸಾಲು ಸಿನಿಮಾಗಳಲ್ಲಿ ನಟ ಗಣೇಶ್ ಗೆ ಅವಕಾಶ ಸಿಕ್ಕಿದ್ದು, ಕಾಮಿಡಿ , ಲವ್ ಸೆಂಟಿಮೆಂಟ್ ಸಿನಿಮಾದ ಮೂಲಕ ಸಾಕಷ್ಟು ಹೆಸರು ಮಾಡಿದರು. ನಾಳೆ (ಜು.2) ಗೋಲ್ಡನ್ ಸ್ಟಾರ್ ಗಣೇಶ್ ಗೆ ಹುಟ್ಟುಹಬ್ಬದ ಸಂಭ್ರಮ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...