ಟಿ20 ವಿಶ್ವಕಪ್ ಗೂ ಮುನ್ನ ಅನೇಕ ಟಿ-20 ಸರಣಿಗಳು ನಡೆಯುತ್ತಿದ್ದು, ಪಾಕಿಸ್ತಾನ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಟಿ ಟ್ವೆಂಟಿ ಪಂದ್ಯ ನಾಳೆ ಲಂಡನ್ ನಲ್ಲಿ ನಡೆಯಲಿದೆ. ಮೊದಲನೇ ಹಾಗೂ ಮೂರನೇ ಪಂದ್ಯ ಮಳೆಯಿಂದ ರದ್ದಾಗಿದ್ದು, ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯಭೇರಿಯಾಗಿತ್ತು. ಇದೀಗ ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ ಸರಣಿ ತನ್ನದಾಗಿಸಿಕೊಳ್ಳಲಿದೆ.
ಏಕದಿನ ವಿಶ್ವಕಪ್ ನಲ್ಲಿ ತನ್ನ ಕಳಪೆ ಪ್ರದರ್ಶನದಿಂದ ಟೀಕೆಗೀಡಾಗಿದ್ದ ಇಂಗ್ಲೆಂಡ್ ತಂಡ ಇದೀಗ ತನ್ನ ಹಳೆಯ ಫಾರ್ಮ್ ಗೆ ಮರಳಿದ್ದು, ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಯಾವ ರೀತಿ ಪ್ರದರ್ಶನ ತೋರಲಿದೆ ಕಾದು ನೋಡಬೇಕಾಗಿದೆ.
ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಇಂಗ್ಲೆಂಡ್ ತಂಡ ತನ್ನ ಮೊದಲ ಪಂದ್ಯದಲ್ಲಿ ಸ್ಕಾಟ್ಲ್ಯಾಂಡ್ ಎದುರು ಮುಖಾಮುಖಿಯಾದರೆ, ಪಾಕಿಸ್ತಾನ ತಂಡ ಯುಎಸ್ಎ ತಂಡವನ್ನು ಎದುರಿಸಲಿದೆ. ಈ ತಂಡಗಳು ನಾಳೆ ತಮ್ಮ ಕೊನೆಯ ಟಿ 20 ಪಂದ್ಯವನ್ನು ಮುಗಿಸಿ ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ಗೆ ಪ್ರಯಾಣ ನಡೆಸಲಿವೆ.