ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಪರೀಕ್ಷೆ 2024 ರಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾ.28 ನಾಳೆ ಕೊನೆಯ ದಿನಾಂಕವಾಗಿದೆ.
ಅಧಿಸೂಚನೆಯ ಪ್ರಕಾರ, ನೋಂದಣಿ ಪ್ರಕ್ರಿಯೆ ಮಾರ್ಚ್ 4 ರಂದು ಪ್ರಾರಂಭವಾಯಿತು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೋಂದಣಿ ಪ್ರಕ್ರಿಯೆಗಾಗಿ ಎಸ್ಎಸ್ಸಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು.ಆಸಕ್ತ ಅಭ್ಯರ್ಥಿಗಳು ಮಾರ್ಚ್ 28, 2024ರೊಳಗೆ ಅರ್ಜಿ ಸಲ್ಲಿಸಬಹುದು.ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ 4187 ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಎಸ್ಎಸ್ಸಿ ಈ ನೇಮಕಾತಿ ಡ್ರೈವ್ ನಡೆಸುತ್ತಿದೆ.
ಪ್ರಮುಖ ದಿನಾಂಕಗಳು
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ಮಾರ್ಚ್ 4, 2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 28, 2024
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : ಮಾರ್ಚ್ 29, 2024
‘ಅರ್ಜಿ ನಮೂನೆ ತಿದ್ದುಪಡಿಗೆ ವಿಂಡೋ’ ಮತ್ತು ತಿದ್ದುಪಡಿ ಶುಲ್ಕಗಳ ಆನ್ಲೈನ್ ಪಾವತಿಯ ದಿನಾಂಕ: ಮಾರ್ಚ್ 30 ರಿಂದ ಮಾರ್ಚ್ 31, 2024
ಕಂಪ್ಯೂಟರ್ ಆಧಾರಿತ ಪರೀಕ್ಷೆಯ ವೇಳಾಪಟ್ಟಿ: ಮೇ 9, 10, ಮತ್ತು 13, 2024
ಖಾಲಿ ಹುದ್ದೆಗಳ ವಿವರ
ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಎಕ್ಸೆ)-ಪುರುಷ: 125
ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಎಕ್ಸೆ)-ಮಹಿಳೆ: 61
CAPF ಸಬ್ ಇನ್ಸ್ಪೆಕ್ಟರ್ (ಜಿಡಿ): 4001
ಒಟ್ಟು ಹುದ್ದೆ: 4187
ಅರ್ಜಿ ಶುಲ್ಕ
ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ.ಗಳನ್ನು ಪಾವತಿಸಬೇಕಾಗುತ್ತದೆ. ಮಹಿಳಾ ಅಭ್ಯರ್ಥಿಗಳು ಮತ್ತು ಮೀಸಲಾತಿಗೆ ಅರ್ಹರಾದ ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡ (ಎಸ್ಟಿ) ಮತ್ತು ಮಾಜಿ ಸೈನಿಕರಿಗೆ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.