
ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ನಾಯಕನಾಗಿ ಅಭಿನಯಿಸುತ್ತಿರುವ ‘ಗೌರಿ’ ಚಿತ್ರದ ಮುಹೂರ್ತ ಸಮಾರಂಭವನ್ನು ನಾಳೆ ಶ್ರೀ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನೆರೆವೇರಿಸಲಾಗುತ್ತಿದೆ.
ಶ್ರೀ ನಿರ್ಮಲಾನಂದ ಸ್ವಾಮೀಜಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕುರಿತು ಇಂದ್ರಜಿತ್ ಲಂಕೇಶ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಇಂದ್ರಜಿತ್ ಲಂಕೇಶ್ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರದಲ್ಲಿ ಸಮರ್ಜಿತ್ ಲಂಕೇಶ್ ಗೆ ಜೋಡಿಯಾಗಿ ಪುಟ್ಟಗೌರಿ ಧಾರವಾಹಿ ಖ್ಯಾತಿಯ ಸಾನಿಯಾ ಅಯ್ಯರ್ ಅಭಿನಯಿಸುತ್ತಿದ್ದು, ರಾಪರ್ ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ನೀಡಲಿದ್ದಾರೆ. ಇದೊಂದು ನೈಜ ಘಟನಾಧಾರಿತ ಸಿನಿಮಾ ಎಂದು ಹೇಳಲಾಗಿದೆ.
