
ಮೆಲ್ಬೋರ್ನ್ ನಲ್ಲಿ ನಡೆದ ಆಸ್ಟ್ರೇಲಿಯಾ – ವೆಸ್ಟ್ ಇಂಡೀಸ್ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಎಂಟು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ನಾಳೆ ಸಿಡ್ನಿಯಲ್ಲಿ ಎರಡನೇ ಏಕದಿನ ಪಂದ್ಯವಿದ್ದು, ಬಲಿಷ್ಠ ಆಸ್ಟ್ರೇಲಿಯಾ ತಂಡ ಈ ಪಂದ್ಯವನ್ನು ಗೆದ್ದು ಸರಣಿ ತನ್ನದಾಗಿಸಿಕೊಳ್ಳುವ ಲೆಕ್ಕಚಾರದಲ್ಲಿದೆ.
ವೆಸ್ಟ್ ಇಂಡೀಸ್ ತಂಡಕ್ಕೆ ನಾಳೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಗೆಲ್ಲಲೇಬೇಕಾದ ಅನಿವಾರ್ಯವಿದೆ. ಆಸ್ಟ್ರೇಲಿಯಾ ವೇಗಿಗಳ ಬೌಲಿಂಗ್ ದಾಳಿಗೆ ವೆಸ್ಟ್ ಇಂಡೀಸ್ ತಂಡಕ್ಕೆ ಉತ್ತರವೇ ಸಿಗದಂತಾಗಿದೆ. ನಾಳೆ ಯಾವ ತಂಡ ಜಯಭೇರಿಯಾಗಲಿದೆ ಕಾದು ನೋಡಬೇಕಾಗಿದೆ. ಏಕದಿನ ಸರಣಿಯ ಬಳಿಕ ಫೆಬ್ರವರಿ 9 ರಿಂದ 13 ರವರೆಗೆ ಮೂರು ಟಿ ಟ್ವೆಂಟಿ ಪಂದ್ಯಗಳು ನಡೆಯಲಿವೆ.