ಸೆಪ್ಟೆಂಬರ್ 15 ರಂದು ರಾಜ್ಯದ್ಯಂತ ತೆರೆ ಮೇಲೆ ಬರಲು ಸಜ್ಜಾಗಿರುವ ‘ಬಾನ ದಾರಿಯಲ್ಲಿ’ ಸಿನಿಮಾದ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದ್ದು, ರಿಲೀಸ್ ಇವೆಂಟ್ ಕಾರ್ಯಕ್ರಮವನ್ನು ಚಿತ್ರತಂಡ ಅದ್ದೂರಿಯಾಗಿ ನೆರವೇರಿಸಲಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.
ಗೋಲ್ಡನ್ ಸ್ಟಾರ್ ಗಣೇಶ್ ಸೇರಿದಂತೆ ರೀಷ್ಮಾ ನಾಣಯ್ಯ, ರುಕ್ಮಿಣಿ ವಸಂತ್, ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರವನ್ನು ಪ್ರೀತಂ ಗುಬ್ಬಿ ನಿರ್ದೇಶಿಸಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ.
ಪ್ರಕಾಶ್ ಸಂಕಲನ, ಅಭಿಲಾಶ್ ಕಲ್ಲತ್ತಿ ಛಾಯಾಗ್ರಹಣವಿದ್ದು, ಮಾಸ್ತಿ ಅವರ ಸಂಭಾಷಣೆ ಇದೆ ಇದೊಂದು ಸ್ಪೋರ್ಟ್ಸ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಸಿನಿಮಾ ಎಂದು ಹೇಳಲಾಗಿದೆ.