ಬೆಂಗಳೂರು : ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಲ್ಲಿ 144 ಸೆಕ್ಷನ್ ( ನಿಷೇಧಾಜ್ಞೆ) ಜಾರಿಯಾಗಲಿದೆ , ಒಂದು ವೇಳೆ ಬಲವಂತವಾಗಿ ಬಂದ್ ಮಾಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ‘ನಾಳೆ ಯಾರೂ ಕೂಡ ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ, ಇಂದು ಮಧ್ಯರಾತ್ರಿ 12 ರಿಂದ ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಯಾವುದೇ ಮೆರವಣಿಗೆ , ಪ್ರತಿಭಟನೆಗೆ ಅವಕಾಶವಿಲ್ಲ. ಪ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆಗೆ ಮಾತ್ರ ಅವಕಾಶ ನೀಡಲಾಗಿದೆ’ ಎಂದರು.
ಈ ಸಂಬಂಧ ಎಲ್ಲಾ ಪೊಲೀಸರಿಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ನಾಳೆ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಎಲ್ಲೆಡೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಪ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆಗೆ ಮಾತ್ರ ಅವಕಾಶ ನೀಡಲಾಗಿದೆ ಎಂದರು.
ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಸೆ.29ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ವಿವಿಧ ಸಂಘಟನೆಗಳು ಬೆಂಬಲ ನೀಡಿದೆ. ಇನ್ನೂ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಅಧಿಕಾರ ನೀಡಿದೆ. ಸರ್ಕಾರಿ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ ಘೋಷಣೆ ಇಲ್ಲ. ಪರಿಸ್ಥಿತಿ ನೋಡಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಸೂಚಿಸಿದೆ.