alex Certify ಕೃಷಿಗೆ ಆಧುನಿಕತೆಯ ಸ್ಪರ್ಶ : ರಾಜ್ಯ ಸರ್ಕಾರದಿಂದ 100 ಹೈಟೆಕ್ ‘ಹಾರ್ವೆಸ್ಟರ್ ಹಬ್’ ಗಳ ಸ್ಥಾಪನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿಗೆ ಆಧುನಿಕತೆಯ ಸ್ಪರ್ಶ : ರಾಜ್ಯ ಸರ್ಕಾರದಿಂದ 100 ಹೈಟೆಕ್ ‘ಹಾರ್ವೆಸ್ಟರ್ ಹಬ್’ ಗಳ ಸ್ಥಾಪನೆ

ಬೆಂಗಳೂರು : ಕೃಷಿಗೆ ಆಧುನಿಕತೆಯ ಸ್ಪರ್ಶ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರ 100 ಹೈ-ಟೆಕ್ ಹಾರ್ವೆಸ್ಟರ್ ಹಬ್ ಗಳ ಸ್ಥಾಪನೆ ಮಾಡಲು ನಿರ್ಧರಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ‘ ಕೃಷಿ ಚಟುವಟಿಕೆಗಳಿಗೆ ಆಧುನಿಕತೆಯ ಸ್ಪರ್ಶ ನೀಡಿ ಬಂಡವಾಳ ವೆಚ್ಚವನ್ನು ತಗ್ಗಿಸುವ ಹಾಗೂ ಅಧಿಕ ಇಳುವರಿ ರೈತರ ಕೈಸೇರುವಂತೆ ಮಾಡುವ ಸಲುವಾಗಿ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ರೂ.100 ಕೋಟಿ ವೆಚ್ಚದಲ್ಲಿ 100 ಹೈ-ಟೆಕ್ ಹಾರ್ವೆಸ್ಟರ್ ಹಬ್ ಗಳನ್ನು ಸ್ಥಾಪನೆ ಮಾಡಲಾಗುತ್ತಿದೆ’ ಎಂದರು.

ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...