ಓಬಳಾಪುರಂ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬಂಧಿಸಿದ್ದ ಸಿಬಿಐ ಮಾಜಿ ಅಧಿಕಾರಿಯೊಬ್ಬರು ಇದೀಗ ಆಂಧ್ರಪ್ರದೇಶದಲ್ಲಿ ಹೊಸ ಪಕ್ಷದ ಸ್ಥಾಪನೆ ಕುರಿತು ಘೋಷಿಸಿದ್ದಾರೆ.
ಸಿಬಿಐ ಜಂಟಿ ನಿರ್ದೇಶಕರಾಗಿದ್ದ ವಿ.ವಿ. ಲಕ್ಷ್ಮಿ ನಾರಾಯಣ ಅವರು ಆಂಧ್ರಪ್ರದೇಶದಲ್ಲಿ ತಮ್ಮ ಹೊಸ ಪಕ್ಷ ‘ಜೈ ಭಾರತ್ ನ್ಯಾಷನಲ್ ಪಾರ್ಟಿ’ (ಜೆ ಬಿ ಎನ್ ಪಿ) ಸ್ಥಾಪನೆಯ ಘೋಷಣೆ ಮಾಡಿದ್ದು, ತಮ್ಮ ಪಕ್ಷ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವುದಾಗಿ ಹೇಳಿದ್ದಾರೆ.
ಮೂಲತಃ ಮಹಾರಾಷ್ಟ್ರ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದ ಲಕ್ಷ್ಮಿ ನಾರಾಯಣ ಅವರು ಆಂಧ್ರದಲ್ಲಿ ನಿಯೋಜನೆ ಮೇರೆಗೆ ಕೆಲಸ ಮಾಡಿದ್ದರು. ತಮ್ಮ ಕಾರ್ಯಾವಧಿಯಲ್ಲಿ ಸತ್ಯಂ ಕಂಪ್ಯೂಟರ್ಸ್, ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ ಹಗರಣ ಸೇರಿದಂತೆ ಹಲವು ಹೈಪ್ರೊಫೈಲ್ ಕೇಸ್ ಗಳ ತನಿಖೆ ನಡೆಸಿದ್ದು, ಇದೀಗ ಆಂಧ್ರಪ್ರದೇಶದಲ್ಲಿ ತಮ್ಮ ರಾಜಕೀಯ ಭವಿಷ್ಯವನ್ನು ಕಂಡುಕೊಳ್ಳಲು ಮುಂದಾಗಿದ್ದಾರೆ.