ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಿರುವಿನಲ್ಲಿ ಪ್ರವಾಸಿಗರ ಬಸ್ ಪಲ್ಟಿಯಾಗಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕುಂಬ್ರಿ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರಿನಿಂದ ಪ್ರವಾಸಿಗರು ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಶೃಂಗೇರಿ ಶಾರದಾ ಮಠಕ್ಕೆ ಭೇಟಿ ಕೊಟ್ಟ ಬಳಿಕ ಅಲ್ಲಿಂದ ಹೊರನಾಡಿಗೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿ ಬಿದ್ದಿದೆ. ಬಸ್ ನಲ್ಲಿ 40ಕ್ಕೂ ಹೆಚ್ಚು ಜನರಿದ್ದರು.
ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.