ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳನ್ನು ಏಪ್ರಿಲ್ 20 ರ ವರೆಗೆ ಬಂದ್ ಮಾಡಲಾಗಿದೆ. ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತದಿಂದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಕೊಡಗು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಿದ್ದಾರೆ. ರೆಸಾರ್ಟ್ ಮತ್ತು ಹೋಂ ಸ್ಟೇಗಳಿಗೆ ಯಾವುದೇ ನಿರ್ಬಂಧವಿರುವುದಿಲ್ಲ. ಆದರೆ, ಕೊರೋನಾ ಮುಂಜಾಗ್ರತೆ ಕ್ರಮಗಳನ್ನು ಪಾಲಿಸಬೇಕು ಎಂದು ಹೇಳಲಾಗಿದೆ.