ಬೆಂಗಳೂರು: ಪ್ರವಾಸಿ ತಾಣಗಳಲ್ಲಿನ ಪ್ರವಾಸಿ ಗೈಡ್ ಗಳಿಗೆ ದಸರಾ ಹಬ್ಬದ ಸಂದರ್ಭದಲ್ಲೇ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ.
ಪ್ರವಾಸಿ ಗೈಡ್ ಗಳಿಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರತಿ ತಿಂಗಳು 2000 ರೂ. ಸಹಾಯಧನ ನೀಡುವ ಯೋಜನೆಯನ್ನು ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ಈ ಮೊತ್ತವನ್ನು 5,000 ರೂ.ಗೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರವಾಸಿ ಗೈಡ್ ಗಳಿಗೆ ಸಹಾಯಧನ ನೀಡುವ ಯೋಜನೆಯ ಮೊತ್ತವನ್ನು 5,000 ರೂ.ಗೆ ಹೆಚ್ಚಳ ಮಾಡಲಾಗುವುದು. ಗೈಡ್ ಗಳಿಗೆ ಬಹು ಭಾಷೆ ಕಲಿಯಲು ತರಬೇತಿ ಕೊಡಿಸಲಾಗುವುದು. ಅಲ್ಲದೇ, ಸರ್ಕಾರದಿಂದ ಬ್ಯಾಡ್ಜ್, ಸಮವಸ್ತ್ರ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.